ಥೈಲ್ಯಾಂಡ್‌ನ ಯುವತಿಯನ್ನು ಮದುವೆಯಾದ ಮಂಗಳೂರಿನ ಯುವಕ
ಮಂಗಳೂರು: ಮಂಗಳೂರಿನ ಪೃಥ್ವಿರಾಜ್ ಎಸ್.ಅಮೀನ್ ಹಾಗೂ ಥೈಲ್ಯಾಂಡ್‌ನ ಮೊಂತಕನ್ ಸಸೂಕ್ ಜೋಡಿ ವಿವಾಹ ಮಾಡಿಕೊಂಡಿದ್ದಾರೆ.
ವಕೀಲೆ ಸುಜಯಾ ಸತೀಶ್ ಹಾಗೂ ಸತೀಶ್ ಕುಮಾರ್ ಅವರ ಪುತ್ರ ಪೃಥ್ವಿರಾಜ್ ಅವರು ಬೆಂಗಳೂರಿನಲ್ಲಿ ತಮ್ಮದೇ ಸಾಫ್ಟ್‌ವೇರ್ ಕಂಪೆನಿ ಹೊಂದಿದ್ದಾರೆ. ಇವರ ಸಂಸ್ಥೆ ಟಾಟಾ, ಪೋರ್ಸ್ ಮುಂತಾದ ಕಂಪೆನಿಗಳಿಗೆ ಸಾಫ್ಟ್‌ವೇರ್ ಸರ್ವೀಸ್ ಒದಗಿಸುತ್ತದೆ. ಪ್ರಾಜೆಕ್ಟ್ ಮೇಲೆ ಥೈಲ್ಯಾಂಡ್ ದೇಶಕ್ಕೆ ಹೋಗಿದ್ದಾಗ ಪೃಥ್ವಿರಾಜ್‌ಗೆ ಪ್ರೇಮಿಗಳ ದಿನದಂದೇ ಮೊಂತಕನ್ ಸಸೂಕ್ ಪರಿಚಯವಾಗಿದ್ದಾರೆ.
ಅವರನ್ನು ನೋಡಿದ್ದೇ ಪೃಥ್ವಿರಾಜ್‌ಗೆ ಪ್ರೀತಿ ಚಿಗುರೊಡೆದಿದೆ. ಮೊಂತಕನ್ ಕೂಡಾ ಇವರ ಪ್ರೀತಿಯನ್ನು ಒಪ್ಪಿದ್ದಾರೆ. ಪ್ರೀತಿ ಗಟ್ಟಿಗೊಳ್ಳುತ್ತಿದ್ದಂತೆ ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ.




