September 21, 2026

RSS ಮುಖಂಡ ಮೋಹನ್ ಭಾಗವತ್ ಇಂದು ಸಂಜೆ ಕಲ್ಲಡ್ಕಕ್ಕೆ

0
image_editor_output_image-352868-1733556257432.jpg

ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘ ಚಾಲಕ್ ಡಾ.ಮೋಹನ್ ಭಾಗವತ್ ಶುಕ್ರವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ಡಿ.7ರ ಸಂಜೆ 5.30ಕ್ಕೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 6 ಗಂಟೆಯ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್ ಭಾಗವತ್, ಸಂಘದ ಪ್ರಾಂತ ಪ್ರಚಾರಕ ಗುರುಪ್ರಸಾದ್‌, ಪ್ರಾಂತ ಸಹ ಕಾರ್ಯವಾಹ ಪಿ.ಎಸ್.ಪ್ರಕಾಶ್‌ ಮತ್ತಿತರ ಹಿರಿಯರು ಬರಮಾಡಿಕೊಂಡರು.

 

ಬಳಿಕ ಝಡ್ ಪ್ಲಸ್ ಭದ್ರತೆಯೊಂದಿಗೆ ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನಕ್ಕೆ ಆಗಮಿಸಿದ್ದು, ಸಂಘದ ಹಿರಿಯರೊಂದಿಗೆ ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *

You may have missed

error: Content is protected !!