September 22, 2026

ಮಂಜನಾಡಿ: ಗ್ಯಾಸ್ ಸಿಲಿಂಡರ್ ಸ್ಪೋಟ: ತಾಯಿ, ಮಕ್ಕಳಿಗೆ ಗಂಭೀರ ಗಾಯ

0
image_editor_output_image-1260886670-1733640435254.jpg

ಉಳ್ಳಾಲ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮೆಅದಿಯಾ,ಮಝಿಯಾ, ಮಾಯಿದಾ ಎಂದು ಗುರುತಿಸಲಾಗಿದೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ಅವರ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ದೊಡ್ಡ ಸದ್ದು ಕೇಳಿಸಿದೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ಕಿಟಕಿ, ಮಲಗಿದ ಕೊಠಡಿ ಸಂಪೂರ್ಣ ಹಾನಿಯಾಗಿದೆ. ಘಟನೆ ಸಂದರ್ಭ ಸ್ಥಳೀಯ ವ್ಯಕ್ತಿಯೊಬ್ಬರು ಬೊಬ್ಬೆ ಹೊಡೆದಿದ್ದು, ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!