March 18, 2026

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ಪರ್ಕಳದ ನಿವಾಸಿ ಸಾವು

0
image_editor_output_image1834963802-1733723598191.jpg

ಮಣಿಪಾಲ: ಟೈರ್ ಪಂಚರ್ ಆದ ಕಾರಣ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ನಡೆದಿದೆ,

ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್(22) ಎಂದು ಗುರುತಿಸಲಾಗಿದೆ. ಟಯರ್ ಪಂಚರ್ ಆದ ಕಾರಣ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!