March 22, 2026

ನೀರಿನಲ್ಲಿ ಮುಳುಗಿಸಿ ಮಗುವನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು

0
n342085468163970996602421666c7ca663b54a84a1c6240f9565da308f3528350f1c028d99e1a7ef7d8e78.jpg

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಹೆತ್ತ ಮಗುವನ್ನೂ ಕೊಂದ ಗೃಹಿಣಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2 ವರ್ಷದ ಮಗು ಮೋಕ್ಷಿತ್‌ನನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಸಾಯಿಸಿದ ತಾಯಿ ಅನ್ನಪೂರ್ಣ(22) ಬಳಿಕ ನೇಣಿಗೆ ಶರಣಾಗಿರುವ ಘಟನೆ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅನ್ನಪೂರ್ಣ ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅವರ ಪತ್ನಿ, ಚಾಮರಾಜನಗರ ಜಿಲ್ಲೆ ಉಮ್ಮತ್ತೂರು ಗ್ರಾಮದ ನಿವಾಸಿ. 2 ವರ್ಷಗಳ ಹಿಂದೆ ಮಹದೇವ ಪ್ರಸಾದ್ ನನ್ನು ಅನ್ನಪೂರ್ಣ ವಿವಾಹವಾಗಿದ್ದರು. ಪತಿ ಹಾಗೂ ಪತ್ನಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಆಗಾಗ ಜಗಳಗಳು ನಡೆಯುತ್ತಿದ್ದವು. ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದ ರಾಜು, ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತ ತಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!