March 19, 2026

ಎಸ್.ಎಂ.ಕೃಷ್ಣ ನಿಧನ ಹಿನ್ನೆಲೆ: ರಾಜ್ಯದಲ್ಲಿ 3 ದಿನ ಶೋಕಾಚರಣೆ ಘೋಷಣೆ: ನಾಳೆ ಸರ್ಕಾರಿ ರಜೆ

0
image_editor_output_image-1036463556-1733808345487.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

‘ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌವರಗಳೊಂದಿಗೆ ನೆರವೇರಿಸಲಾಗುವುದು’ ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಮಂಗಳವಾರ) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಬುಧವಾರ ಸರ್ಕಾರಿ ರಜೆ: ‘ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 8 ರವರೆಗೆ ಅಂತಿಮ ದರ್ಶನ ನಡೆಯಲಿದ್ದು, ಬುಧವಾರ ಬೆಳಿಗ್ಗೆ 10.30 ರಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ’ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!