ಕೊಣಾಜೆ: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28 ಲಕ್ಷ ರೂ. ವಂಚನೆ: ಇಬ್ಬರು ಆರೋಪಿಗಳ ಬಂಧನ
ಕೊಣಾಜೆ: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 28,18,065ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರ ನಿವಾಸಿ ಅಮೀರ್ ಸುಹೇಲ್ ಮತ್ತು ಜಮ್ಮು ಕಾಶ್ಮೀರದ ಅನಂತನಾಗ ಜಿಲ್ಲೆಯ ನಿವಾಸಿ ಸುಹೇಲ್ ಅಹ್ಮದ್ ವಾನಿ ಬಂಧಿತ ಆರೋಪಿಗಳು.
2024ರ ಜುಲೈ 21ರಂದು ಪಾರ್ಟ್ ಟೈಮ್ ಜಾಬ್ ನ ಬಗ್ಗೆ ದೂರುದಾರರಿಗೆ ಪೋನ್ ನಂಬರ್‌ಗೆ ವಾಟ್ಸಾಪ್ ಮೆಸೇಜ್ ಬಂದಿರುತ್ತದೆ. ಆರೋಪಿಗಳು ದೂರುದಾರರ ವಾಟ್ಸಾಪ್ ಗೆ ಟೆಲಿಗ್ರಾಮ್ ಆ್ಯಪ್ ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದಾರೆ.
ಅದರಂತೆ ದೂರುದಾರರು ಟೆಲಿಗ್ರಾಮ್ ಆ್ಯಪ್ ಅನ್ನು ಓಪನ್ ಮಾಡಿದಾಗ ಟೆಲಿಗ್ರಾಮ್ ನಲ್ಲಿ ಪಾರ್ಟ್ ಟೈಮ್ ಜಾಬ್ ಏನೆಂದು ಕೇಳಿದಾಗ ಅವರಿಗೆ ಒಂದು ವಿಡಿಯೋ ಕಳುಹಿಸಿ ಅದನ್ನು ನೋಡಿ ಸ್ಕ್ರೀನ್ ಶಾಟ್ ನ್ನು ಕಳುಹಿಸುವಂತೆ ಹೇಳಿದ್ದಾರೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಐಟಿ ಕಾಯಿದೆಯಂತೆ ದುರು ದಾಖಲಾಗಿರುತ್ತದೆ. ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ (ಐಪಿಎಸ್) ಅವರ ನಿರ್ದೇಶನದಂತೆ ಕಾರ್ಯಾಚರಣೆ ನಡೆದಿದೆ.