ಆ್ಯಪ್ ಮೂಲಕ 2,000 ರೂ. ಸಾಲ ಪಡೆದಿದ್ದ ವ್ಯಕ್ತಿ: ಆ್ಯಪ್ ಏಜೆಂಟರ ಕಿರುಕುಳದಿಂದ ವ್ಯಕ್ತಿ ಆತ್ಮಹತ್ಯೆ
ಅಮರಾವತಿ: ತ್ವರಿತ ಸಾಲ ನೀಡುವ ಆ್ಯಪ್ ಮೂಲಕ 2,000 ರೂ. ಸಾಲ ಪಡೆದಿದ್ದ ವ್ಯಕ್ತಿಯೊಬ್ಬ ಆ್ಯಪ್ ಏಜೆಂಟರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ನರೇಂದ್ರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆ್ಯಪ್ ಏಜೆಂಟರು ತನ್ನ ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಫೋಟೋವನ್ನು ನರೇಂದ್ರ ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ಕಳುಹಿಸಿದ್ದಾರೆ. ಇದರಿಂದ ಮನನೊಂದ ನರೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ.