March 19, 2026

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ

0
image_editor_output_image445468961-1733983025538.jpg

ಕಲಬುರಗಿ:‌ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.

ಖಲೀಲ್ ಅಹಮದ್ (38) ಹತ್ಯೆಗೀಡಾದ ರೌಡಿಶೀಟರ್. ವೈಕ್ತಿಯ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೋಸ್ಟ್ ವಾಂಟೆಡ್ ಆಗಿದ್ದ ಖಲೀಲ್‌, ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.

ಇನ್ನೂ ಖಲೀಲ್‌ ಸ್ನೇಹಿತ ಅಲಿಲ್ ಪಟೇಲ್ ಮೇಲೂ ಹಲ್ಲೆ ನಡೆದಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!