ಮಡಿಕೇರಿ: ಗಾಂಜಾ ಮಾರಾಟ, ಇಬ್ಬರು ಬೆಡ್ ಶೀಟ್ ಮಾರಾಟಗಾರರ ಬಂಧನ
ಮಡಿಕೇರಿ: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಡಿ.12ರ ಗುರುವಾರ ಬಂಧಿಸಿದ್ದಾರೆ.
ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿಂದ 550 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾ ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.