December 15, 2025

ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಸ್ಫೋಟ: ಡ್ರೋಣ್ ಪ್ರತಾಪ್ ಬಂಧನ

0
image_editor_output_image1097419095-1734066655344.jpg

ತುಮಕೂರು: ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ಸಂಬಂಧ ತುಮಕೂರು ಜಿಲ್ಲೆಯ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮಿಡಿಗೇಶಿ ಪೊಲೀಸರು ಪ್ರತಾಪ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಜ್ಞಾನ ಪ್ರಯೋಗ ಹೆಸರಲ್ಲಿ ಪ್ರತಾಪ್ ಈ ಪರೀಕ್ಷೆ ಮಾಡಿದ್ದರು. ಸೋಡಿಯಂ ಸೇರಿದಂತೆ ರಾಸಾಯನಿಕಗಳನ್ನು ಸೇರಿಸಿ ಕೃಷಿ ಹೊಂಡಕ್ಕೆ ಎಸೆಯಲಾಗಿತ್ತು. ನಂತರ ದೊಡ್ಡ ಸ್ಫೋಟ, ಜ್ವಾಲೆ ಮತ್ತು ಬಾಂಬ್ ಸ್ಫೋಟವನ್ನು ಹೋಲುವ ದೃಶ್ಯಗಳನ್ನು ಉಂಟುಮಾಡಿತು. ಪರಿಸರವಾದಿಗಳು ಮತ್ತು ಸಾರ್ವಜನಿಕರು ಪ್ರತಾಪ್ ಅವರನ್ನು ತೀವ್ರವಾಗಿ ಟೀಕಿಸಿದರು.

ಸಾಮಾಜಿಕ ಮಾಧ್ಯಮ ವೀಕ್ಷಣೆಗಳಿಗಾಗಿ ಅಪಾಯಕಾರಿ ಕೃತ್ಯಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ದುಷ್ಕರ್ಮಿಗಳು ಇಂತಹ ಪ್ರದರ್ಶನಗಳ ಸಂಭಾವ್ಯ ದುರುಪಯೋಗದ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!