ಮಂಜೇಶ್ವರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಆರೋಪಿಯ ಬಂಧನ
ಕಾಸರಗೋಡು: ಕೊಲೆ ಯತ್ನ ಹಾಗೂ ಇನ್ನಿತರ ಪ್ರಕರಣಗಲ್ಲಿ ಶಾಮೀಲಾಗಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ತಲೆಮರೆಸಿಕೊಂಡ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉಪ್ಪಳ ಕೈಕಂಬದ ಆದಂ (40) ಬಂಧಿತ ಆರೋಪಿ. 2018ರಲ್ಲಿ ಉಪ್ಪಳದಲ್ಲಿ ಮುಸ್ತಫಾ ಎಂಬವರನ್ನು ಇರಿದು ಕೊಲೆಗೆತ್ನಿಸಿದ ಪ್ರಕರಣದ ಆರೋಪಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನನ್ನು 2020ರಲ್ಲಿ ಬಂಧಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಕೋವಿಡ್ ನಿಗಾ ಘಟಕಕ್ಕೆ ಈತನನ್ನು ದಾಖಲಿಸಲಾಗಿತ್ತು.
ಈ ಸಂದರ್ಭದಲ್ಲಿ ಪೊಲೀಸರನ್ನು ತಪ್ಪಿಸಿ ತಲೆಮರೆಸಿಕೊಂಡಿದ್ದನು. ಕರ್ನಾಟಕ, ಆಂಧ್ರಪ್ರದೇಶ ಮೊದಲಾದೆಡಗಳಲ್ಲಿ ತಲೆಮರೆಸಿಕೊಂಡಿದ್ದನು. ಕೊಲೆಯತ್ನ, ಮಾದಕ ವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಮೀಲಾಗಿದ್ದನು.