March 18, 2026

ಪುಷ್ಪ-2 ಸಿನಿಮಾದ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ

0
image_editor_output_image-675097246-1734079061567.jpg

ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಇದರೊಂದಿಗೆ ಅಲ್ಲು ಅಭಿಮಾನಿಗಳು ಶಾಕ್ ಗೆ ಒಳಗಾಗಿದ್ದಾರೆ.

ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಾಲ್ತುಳಿತಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ಮಂದಿರದ ಮಾಲಕ ಸೇರಿ ಚಿತ್ರ ತಂಡದ ಮೇಲೆ ಕೇಸ್ ದಾಖಲಾಗಿತ್ತು. ಅದರಂತೆ ಚಿಕ್ಕಡಪಲ್ಲಿ ಪೊಲೀಸರು ಇಂದು ಬೆಳಗ್ಗೆ ನಟನನ್ನು ಅರೆಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!