ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2 ಬುಧವಾರ ಸಂಜೆ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣವೆರೆಗೆ ಕಾಲ್ನಡಿಗೆ ಜಾಥಾ ಹಾಗೂ ಸಭಾಕಾರ್ಯಕ್ರಮ ನಡೆಯಿತು.



ಕಲ್ಲೇರಿಯಲ್ಲಿ ಹೋರಾಟಗಾರರಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ತದನಂತರ ಕಲ್ಲೇರಿಯಿಂದ ಬೆಳ್ತಂಗಡಿ ವರೆಗೆ ಬೈಕ್ ಜಾಥ ನಡೆಯಿತು. ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ರವರು ಸಮಿತಿ ವತಿಯಿಂದ ಹೋರಾಟಗಾರರಿಗೆ ಹೂಗುಚ್ಚ ನೀಡಿ ಸ್ವಾತಿಸಿದರು. ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥಾ ನಡೆಯಿತು
ಜಾಥಾ ಉದ್ದೇಶಿಸಿ ಎಸ್‌ಡಿಪಿಐ ರಾಜ್ಯಾಧ್ಯಕ್ಷರು ಮುಖ್ಯ ಭಾಷಣ ಮಾಡಿದರು. ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ, ರಾಜ್ಯ ಪ್ರಧಾನ ಕಾರ್ಯದರ್ಶಿ, ಜಾಥಾ ಸಂಚಾಲಕರಾದ ಭಾಸ್ಕರ್ ಪ್ರಸಾದ್, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಜಾಥಾ ಉದ್ದೇಶಿಸಿ ಮಾತುಗಳನ್ನಾಡಿದರು.
ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಜಾಥದ ಸಹ ಸಂಚಾಲಕರಾದ ರಂಜಾನ್ ಕಡಿವಾಳ, ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೊಡ್ರಿಗಸ್ ಉಪಸ್ಥಿತರಿದ್ದರು.



ಜಿಲ್ಲಾ ಸಮಿತಿ ಸದಸ್ಯರು ನವಾಜ್ ಷರೀಫ್ ಕಟ್ಟೆ, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲು, ಅಬೂಬಕ್ಕರ್ ಮದ್ದ, ಅಶ್ರಫ್ ತಲಪಾಡಿ, ಕ್ಷೇತ್ರ ನಾಯಕರು,ಪಕ್ಷದ ಕಾರ್ಯಕರ್ತರು ಹಾಗೂ ಬೆಳ್ತಂಗಡಿಯ ನಾಗರೀಕರು ಉಪಸ್ಥಿತರಿದ್ದರು.




