March 18, 2026

ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಮೃತ್ಯು

0
image_editor_output_image-1150717256-1734151435545.jpg

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ,‌ ಮುಟ್ಲುಪಾಡಿ,‌ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಪ್ರೀತಂ‌ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗ‌ಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಪ್ರತಿಭಾನ್ವಿತ ಪ್ರೀತಂ ಅವರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಹಂತಹಂತವಾಗಿ‌ ಶ್ರಮವಹಿಸಿ ಕಬಡ್ಡಿ ಆಟಗಾರನಾಗಿ ಖ್ಯಾತಿ ಪಡೆದಿದ್ದರು. ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!