February 4, 2026

ಮಂಗಳೂರು: ದಾಖಲೆ ನೀಡಲು 9 ಸಾವಿರ ರೂ ಲಂಚ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.‌ದಂಡ

0
image_editor_output_image-1185376573-1734167484004.jpg

ಮಂಗಳೂರು: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯ್ಕ 9/11ರ ದಾಖಲೆ ನೀಡಲು ₹9,000 ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇಲೆ 2019ರ ಜೂನ್ 3ರಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದರು.

ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಮಸುಂದರ ಎಚ್.ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಪ್ರಕಟಿಸಿದೆ.

ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ ₹50 ಸಾವಿರ ದಂಡ ವಿಧಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪಾಡಿ ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!