February 4, 2026

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

0
n6434480111734246336611543e0c7a49950fea328e3d85d0d8e4faf8c64161cab383d049d99cc7ffd5e694.jpg

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘನಿಯಾ ಅತ್ತೆ ನಿಶಾ ಸಿಂಘನಿಯಾ ಹಾಗೂ ಬಾಮೈದಾ ಅನುರಾಗ್ ಸಿಂಘಾನಿಯಾ ಮೂವರನ್ನೂ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ನಿಖಿತಾ ರನ್ನ ವಶಕ್ಕೆ ಪಡೆಯಲಾಗಿದ್ದು, ಅಲಹಾಬಾದ್ ನಲ್ಲಿ ಅತ್ತೆ ಹಾಗೂ ಬಾಮೈದನನ್ನ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.

ಪತ್ನಿ ಹಾಗೂ ಆಕೆಯ ಮನೆಯವರ ನಿರಂತರ ಕಿರುಕುಳದಿಂದ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಕಳೆದ 4 ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅತುಲ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!