March 27, 2026

ಬಂಟ್ವಾಳ ದಿಂದ ಪ್ರವಾಸಕ್ಕೆ ತೆರಳಿದ ಶಾಲಾ ಮಕ್ಕಳ ಬಸ್ ಪಲ್ಟಿ: 20ಕ್ಕೂ ಅಧಿಕ ಮಂದಿ ಗಾಯ

0
n64348672417342578858766f955f985c03c4998c7b6f6f5ecd766d28a443740369ff24d38b7134954024dd.jpg

ಸಾಗರ: ಬಿ.ಸಿ ರೋಡ್ ನಿಂದ ಶಿವಮೊಗ್ಗದ ಜೋಗದ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.

ಮಂಗಳೂರಿನಿಂದ ಶಿವಮೊಗ್ಗದ ಸಾಗರ ಬಳಿಯ ಜೋಗದ ಜಲಪಾತ ವೀಕ್ಷಣೆಗಾಗಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ಮಂಗಳೂರಿನ 55 ಮಂದಿ ತೆರಳಿದ್ದರು. ಈ ಬಸ್ ಅರಳಗೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಪಲ್ಟಿ ಹೊಡೆದಿದೆ.

ಗಾಯಾಳುಗಳನ್ನು ಕಾರ್ಗಲ್ ಆಸ್ಪತ್ರೆಗೆ ಹಾಗೂ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಬಿ.ಸಿ.ರೋಡ್ ನಿಂದ ಟೂರಿಸ್ಟ್ ಪ್ಯಾಕೇಜ್ ನಲ್ಲಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ.

ಅರಳಗೋಡು ತಿರುವಿನಲ್ಲಿ ಇಂದು ಮಧ್ಯಾಹ್ನ 1:30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಳಿಬಿದ್ದಿದೆ. ಇದರಿಂದ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರ್ಗಲ್ ಸಾದಿಕ್ ಮತ್ತವರ ಸ್ನೇಹಿತರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಆಸ್ಪತ್ರೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!