March 27, 2026

ಬೆಳ್ತಂಗಡಿ: ಬಸ್, ಬೈಕ್ ನಡುವೆ ಅಪಘಾತ: ಬಸ್ ನಡಿಗೆ ಬಿದ್ದು ಬೈಕ್ ಸವಾರ ಸಾವು

0
image_editor_output_image-2096032672-1734326491358.jpg

ಬೆಳ್ತಂಗಡಿ: ಅಯ್ಯಪ್ಪ ಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಬಸ್ ನಡಿಗೆ ಬಿದ್ದು ಸಾವನಪ್ಪಿದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಡಿಸೆಂಬರ್ 15ರ ಸಂಜೆ ಸಂಭವಿಸಿದೆ.

ಮೃತರನ್ನು ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು.

ಆ ಬಸ್‌, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್‌ ಸಮೀಪ ಮುಖಾಮುಖಿ ಢಿಕ್ಕಿ ಆಗಿದೆ.

ಅಪಘಾತದ ರಭಸಕ್ಕೆ ಬೈಕ್‌ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ತತ್‌ಕ್ಷಣ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಮರದ ಕೆಲಸ ಮಾಡುತ್ತಿದ್ದರು. ತಂದೆ, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!