ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್: ಡ್ರೋನ್ ಪ್ರತಾಪ್ಗೆ ಡಿ.26ರವರೆಗೆ ನ್ಯಾಯಾಂಗ ಬಂಧನ
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಡಿ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯ ಆದೇಶ ನೀಡಿದೆ.
ಮೂರು ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು.
ಕಳೆದ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಪೊಲೀಸರು 5 ದಿನ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 3 ದಿನ ಕಸ್ಟಡಿಗೆ ಕೊಟ್ಟಿತ್ತು. ಅದರಂತೆ ಇಂದು ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ನನ್ನು ಮಧುಗಿರಿ ಉಪ ಕಾರಾಗ್ರಹಕ್ಕೆ ಕಳುಹಿಸಲಾಗಿದೆ.