March 22, 2026

ತಮಿಳುನಾಡು: ಶಾಲೆಯ ಗೋಡೆ ಕುಸಿದು ಮೂವರು ವಿದ್ಯಾರ್ಥಿಗಳು ಮೃತ್ಯು

0
tamil_nadu_toilet_wall_collaps.jpg

ತಮಿಳುನಾಡು: ಶುಕ್ರವಾರ ತಿರುನೆಲ್ವೇಲಿ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಶೌಚಾಲಯದ ಗೋಡೆ ಕುಸಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ಮಕ್ಕಳು ಶಾಫ್ಟರ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು. ಶೌಚಾಲಯದ ಗೋಡೆ ಕುಸಿದು ಬಿದ್ದಾಗ ಅದರ ಕೆಳಗೆ ಬಿದ್ದಿದ್ದಾರೆ ಎಂದು ಶಾಲೆಯವರು ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಈಗಾಗಲೇ ಸ್ಥಳದಲ್ಲಿವೆ.

ಘಟನೆಯಲ್ಲಿ ಸಾವನ್ನಪ್ಪಿದ ಮೂವರು ಮಕ್ಕಳು ಅನ್ಬಳಗನ್ (9ನೇ ತರಗತಿ), ವಿಶ್ವ ರಂಜನ್ (8ನೇ ತರಗತಿ), ಮತ್ತು ಸುತೇಶ್ (6ನೇ ತರಗತಿ) ಎಂದು ಗುರುತಿಸಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಸಂಜಯ್ (8ನೇ ತರಗತಿ), ಇಸಾಕಿ ಪ್ರಕಾಶ್ (9ನೇ ತರಗತಿ), ಶೇಖ್ ಅಬೂಬಕರ್ ಕಿದಾನಿ (12ನೇ ತರಗತಿ) ಮತ್ತು ಅಬ್ದುಲ್ಲಾ (7ನೇ ತರಗತಿ) ಎಂದು ಗುರುತಿಸಲಾಗಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಮೃತ ಮೂರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ, ಗಾಯಗೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಾಜ್ಯ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಘಟನೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ ಮತ್ತು ಎಲ್ಲಾ ಶಾಲೆಗಳಲ್ಲಿ ತಕ್ಷಣದ ತಪಾಸಣೆಗೆ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!