ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಬೆಂಕಿ
ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ ವಾಹನ ಬಂದು ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ