ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟಿ ಪವಿತ್ರಾ ಗೌಡ ಆರು ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ನಟಿ ಪವಿತ್ರಾ ಗೌಡ ಆರು ತಿಂಗಳ ಬಳಿಕ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ನಗು ನಗುತ್ತಲೆ ಹೊರ ಬಂದಿದ್ದಾರೆ.
ಈ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಮೊದಲನೇ ಆರೋಪಿಯಾಗಿದ್ದರೆ, ಪ್ರದೂಷ್ ನಾಲ್ಕನೇ ಆರೋಪಿ ಆಗಿದ್ದಾನೆ. ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಇವರಿಬ್ಬರು ಕಳೆದ ಜೂನ್ 20ರಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಇದೇ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಡಿ.13ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್ ಬಿಡುಗಡೆಯಾಗಿದ್ದಾನೆ.
ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.