ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ: ಇಬ್ಬರು ಆರೋಪಿಗಳ ಬಂಧನ
ರಾಮನಗರ: ನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಮೃತ ಕುಮಾರಿ (21) ಹಾಗೂ ಸುರೇಂದ್ರ ಮೆಹ್ರಾ (22) ಎಂದು ಗುರುತಿಸಲಾಗಿದೆ. ನ.24ರಂದು ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿತ್ತು. ಆಗ ತಾನೆ ಹುಟ್ಟಿದ ಮಗುವನ್ನ ಟಾಯ್ಲೆಟ್ ಕಮೋಡ್‍ಗೆ ಹಾಕಿ ಆರೋಪಿಗಳು ಫ್ಲಶ್ ಮಾಡಿದ್ದರು. ಬಳಿಕ ಅಲ್ಲಿಂದ ಪರಾರಿಯಾಗಿದ್ದರು.