February 1, 2026

ಮಂಗಳೂರು: ಮಾದಕ ವಸ್ತು ಕೋಕೆನ್ ಪೂರೈಕೆ: ನೈಜೇರಿಯಾ ಪ್ರಜೆಯ ಬಂಧನ

0
image_editor_output_image1763525498-1734453103461.jpg

ಮಂಗಳೂರು: ಮಂಗಳೂರಿಗೆ ಮಾದಕ ವಸ್ತು ಕೋಕೆನ್ ಪೂರೈಕೆ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.

ಗೋವಾದಲ್ಲಿ ನೆಲೆಸಿರುವ ಆರೋಪಿ ಮೈಕೆಲ್ ಒಕಾಫರ್ ಓಡಿಕ್ಪೋ(44) ಬಂಧಿತ ಆರೋಪಿ. ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

2024 ನೇ ಮಾರ್ಚ್ ತಿಂಗಳಲ್ಲಿ ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿಕೊಂಡು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್.ಯು @ ಶಾನ್ ನವಾಜ್, ಮಹಮ್ಮದ್ ಅಶ್ಫಕ್ @ ಅಶ್ಫಾ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಗೋವಾ ರಾಜ್ಯದ ಉತ್ತರ ಗೋವಾದ ಕಾಲನ್ ಗೂಟ್
ಎಂಬಲ್ಲಿಗೆ ಆರೋಪಿ ಪತ್ತೆ ಹಚ್ಚಿದ್ದಾರೆ.

Leave a Reply

Your email address will not be published. Required fields are marked *

error: Content is protected !!