December 20, 2024

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಮಲ್ಪೆ ಮೀನುಗಾರಿಕೆ ಇಲಾಖೆಯ ಮೀಟಿಂಗ್‌ ರೂಮ್‌ ಭಸ್ಮ

0

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಮೀಟಿಂಗ್‌ ರೂಮ್‌ ಸುಟ್ಟು ಕರಕಲಾದ ಘಟನೆ ಮಲ್ಪೆಯಲ್ಲಿ ನಡೆದಿದೆ.

ಬೆಳಗ್ಗೆ ಕಚೇರಿ ತೆರೆದಾಗಲೇ ವಿಷಯ ಬೆಳಕಿಗೆ ಬಂದಿದ್ದು, ಉರಿಯುತ್ತಿದ್ದ ಅವಶೇಷಗಳನ್ನು ಅಗ್ನಿಶಾಮಕ ದಳದವರು ನಂದಿಸಿದ್ದಾರೆ. ರೂಮ್‌ನೊಳಗಿದ್ದ ಹವಾನಿಯಂತ್ರಕ ಯಂತ್ರ ಸ್ಫೋಟಗೊಂಡಿದ್ದು, ರೂಮ್‌ನ ಒಳಗಿದ್ದ ಎಲ್ಲ ಕಡತಗಳು ಸುಟ್ಟು ಬೂದಿಯಾಗಿವೆ. ಫ್ಯಾನ್‌, ಚಯರ್‌, ಟೇಬಲ್‌, ಲೈಫ್‌ಬಾಯ್‌, ಲೈಫ್ಜಾಕೆಟ್‌, ಸೇರಿದಂತೆ ಪಾರ್ಟಿಶನ್‌ ಗೋಡೆ ಸಂಪೂರ್ಣ ಹಾನಿಯಾಗಿದೆ. ಬೆಂಕಿ ಇತರ ಕೋಣೆಯನ್ನು ಆವರಿಸಿದರೆ ಈ ಕಟ್ಟಡ ಪೂರ್ತಿ ಬೆಂಕಿಗಾಹುತಿಯಾಗುತ್ತಿತ್ತು ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!