ಮಂಗಳೂರು: ಬ್ಯಾಂಕ್ ಅಧ್ಯಕ್ಷರ ಕಿರುಕುಳ ಆರೋಪ: ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ
![](https://prathidina.com/wp-content/uploads/2024/12/image_editor_output_image1785134293-1734504507606.jpg)
ಮಂಗಳೂರು: ಸಾಲ ಮರು ಪಾವತಿ ವಿಚಾರಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಫೆರ್ಮಾಯಿ ಎಂಬಲ್ಲಿ ನಡೆದಿದೆ.
ಮೃತರನ್ನು ಫೆರ್ಮಾಯಿ ನಿವಾಸಿ ಮನೋಹರ್ ಪಿರೇರಾ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಕ್ಯಾಥೊಲಿಕ್ ಸಹಕಾರಿ ಬ್ಯಾಂಕ್ ನಲ್ಲಿ 15 ಲಕ್ಷ ಸಾಲ ಪಡೆದಿದ್ದರು, ಬಳಿಕ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಬಂದು ಪ್ಯಾರಾಲಿಸಿಸ್ ಆಗಿ ಕಾಲು ಊನಗೊಂಡಿತ್ತು, ಬಳಿಕ ಕೋವಿಡ್ ಕಾರಣದಿಂದ ಅವರಿಗೆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.
ಈ ಕಾರಣಕ್ಕೆ ಎರಡು ವರ್ಷಗಳ ಹಿಂದೆ ಮನೆಯನ್ನು ಬ್ಯಾಂಕ್ ಸೀಜ್ ಮಾಡಿತ್ತು, ಬಳಿಕ ಮನೋಹರ್ ಸಾಲ ತೀರಿಸಲು ಚಾರಿಟಿ ಸಂಸ್ಥೆಯಿಂದ 15 ಲಕ್ಷ ಮೊತ್ತವನ್ನು ಸೆಲ್ಫ್ ಚೆಕ್ ಮೂಲಕ ಬ್ಯಾಂಕಿಗೆ ನೀಡಿದ್ದರು ಎಂದು ಹೇಳಲಾಗಿದೆ. ಆದರೆ ಈ ಸೆಲ್ಫ್ ಚೆಕ್ ನಲ್ಲಿ ನೀಡಿದ್ದ ಮೊತ್ತವನ್ನು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಗುಳುಂ ಮಾಡಿದ್ದಾಗಿ ಆರೋಪಿಸಲಾಗಿದೆ.