ಯುವತಿ ನದಿಗೆ ಹಾರಿ ಆತ್ಮಹತ್ಯೆ: ಸುದ್ದಿ ತಿಳಿದ ಪ್ರಿಯಕರ ನೇಣು ಬಿಗಿದು ಆತ್ಮಹತ್ಯೆ
ಮಂಡ್ಯ: ಪ್ರೇಮ ಪುರಾಣಕ್ಕೆ ಇಬ್ಬರು ವಿವಾಹಿತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದೆದೆ.
ಮದುವೆಯಾಗಿದ್ದರೂ ಗೆಳೆಯನಿಗಾಗಿ ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಅತ್ತ ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ.
ಕಳೆದ ಕೆಲವು ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪ್ರೀತಿಸುತ್ತಿದ್ದರು. ಈ ಮಧ್ಯೆ ಪ್ರಸನ್ನ ಸೃಷ್ಟಿಯ ಸ್ನೇಹಿತೆ ಸ್ಪಂದನಾಳನ್ನು ಪ್ರೀತಿ ಮಾಡುತ್ತಿದ್ದ ಅಂತಿಮವಾಗಿ ಪ್ರಸನ್ನ ಮತ್ತು ಸ್ಪಂದನಾ ಮದುವೆಯಾದರೆ ಒಂದೂವರೆ ವರ್ಷದ ಹಿಂದೆ ದಿನೇಶ್ ಜೊತೆ ಸೃಷ್ಟಿಯ ಮದುವೆ ನಡೆದಿತ್ತು.