November 26, 2026

ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃತ್ಯು

0
image_editor_output_image-1600795782-1734519560904.jpg

ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ(ಡಿ18) ನಡೆದಿದೆ.

ಮುಬಷಿರ್ ಭಾನು(17) ಮೃತ ದುರ್ದೈವಿಯಾಗಿದ್ದು,ದ್ವಿತೀಯ ಪಿಯುಸಿ ಓದುತ್ತಿದ್ದಳು. ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಪಿರಿಯರ್ ಕಾಲೇಜ್ ನಲ್ಲಿ ಪ್ರಜ್ಞೆ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಬಿದ್ದು ಸಾವನ್ನಪ್ಪಿದ್ದಾಳೆ.

ಪ್ರೌಢ ಶಾಲೆಯ ಶಿಕ್ಷಕರು ಕಾಲೇಜಿಗೆ ಬಂದ ಹಿನ್ನಲೆ ಮಾತಾಡಿಸಲೆಂದು ಪ್ರಿನ್ಸಿಪಾಲ್ ಕಚೇರಿಗೆ ಬರುತ್ತಿದ್ದ ವೇಳೆ ಲೋ ಬಿಪಿಯಿಂದ ಮೂರ್ಛೆ ತಪ್ಪಿ ಬಿದ್ದಿದ್ದಾಳೆ. ತತ್ ಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಯುವತಿ ಬಿದ್ದು ಸಾವನ್ನಪ್ಪಿದ ವಿಡಿಯೋ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!