ಮದುವೆಯಾಗಿ ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿದ ಜೋಡಿ
ಚಿಕ್ಕಮಗಳೂರು: ಅಂರ್ತಾಜಾತಿ ಪ್ರೇಮಿಗಳು ವಿವಾಹವಾಗಿ ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿ ರುವ ಘಟನೆ ನಡೆದಿದೆ.
ಅಜೇಯ್ ಹಾಗೂ ಶಾಲಿನಿ ಅಂರ್ತಾಜಾತಿ ಪ್ರೇಮಿಗಳಾಗಿದ್ದು, ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆಯವರನ್ನು ಭೇಟಿಯಾಗಿ ರಕ್ಷಣೆ ನೀಡುವಂತೆ ಕೋರಿಕೊಂಡಿದ್ದಾರೆ.
ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಅಂರ್ತಾಜಾತಿ ಪ್ರೇಮಿಗಳು ದೇವಸ್ಥಾನದಲ್ಲಿ ಮದುವೆಯಾದ ನಂತರವೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಘಟನೆ ಸಂಬಂಧ ಮಾಹಿತಿ ಪಡೆದು ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಅಜೇಯ್ ಮತ್ತು ಶಾಲಿನಿ ಅಂರ್ತಾಜಾತಿ ಪ್ರೇಮಿಗಳಾಗಿದ್ದು, ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿರುವುದಾಗಿ ತಿಳಿಸಿದ್ದಾರೆ.