ಉಳ್ಳಾಲ: ನೇತ್ರಾವತಿ ಸೇತುವೆಯ ರಸ್ತೆ ಗುಂಡಿಗಳಿಗೆ ತೇಪೆ ಕಾರ್ಯ: ಕಿಲೋ ಮೀಟರ್ ಗಟ್ಟಲೇ ಬ್ಲಾಕ್
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಹೆದ್ದಾರಿ ಗುಂಡಿಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸೇತುವೆಗೆ ತೇಪೆ ಹಚ್ಚುವ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿದೆ.
ವಾಹನ ಚಾಲಕರು, ಆ್ಯಂಬುಲೆನ್ಸ್ ಸೇರಿದಂತೆ ಮಂಗಳೂರು ಕಡೆ ಸಂಚರಿಸುವ ಪ್ರಯಾಣಿಕರು ಪರದಾಡುವಂತಾಗಿದ್ದು, ಸುಮಾರು 2 ಕಿ.ಮೀ.ವರೆಗೆ ವಾಹನಗಳು ಸರತಿ ಸಾಲಿನಲ್ಲಿ ಸಂಚರಿಸುಂತಾಯಿತು.
ಪೀಕ್ ಅವರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಸೇತುವೆಯ ರಸ್ತೆಗೆ ತೇಪೆ ಕಾರ್ಯ ನಡೆಸಿದ್ದರಿಂದ ಕರ್ನಾಟಕದ -ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ವ್ಯತ್ಯಯವಾಯಿತು.
ಕೇರಳದಿಂದ ಮಂಗಳೂರಿಗೆ ಬರುವ ಹಲವು ಅಂಬ್ಯುಲೆನ್ಸ್ ಗಳು ಟ್ರಾಫಿಕ್ ಜಾಂನಲ್ಲಿ ಸಿಲುಕಿ ಹಲವು ರೋಗಿಗಳಿಗೆ ಸಮಸ್ಯೆಯಾಗಿದೆ.