ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ:
ಪ್ರಯಾಣಿಕರು ಅಪಾಯದಿಂದ ಪಾರು
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಹೊತ್ತಿ ಉರಿದಿದ್ದು, ಅದೃಶ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.
ನಗರದ ಹೊರ ವಲಯದಲ್ಲಿ ವಿಜಯಪುರದ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಸೋಲಾಪುರದಿಂದ ವಿಜಯಪುರ ನಗರಕ್ಕೆ ಬರುವಾಗ ನಗರದ ಹೊರ ವಲಯದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ಮೂವರು ಕಾರಿನಿಂದ ಹೊರ ಬಂದು ಜೀವ ರಕ್ಷಿಸಿಕೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ವಿವರ ಲಭ್ಯವಾಗಿಲ್ಲ. ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





