March 19, 2026

ಸುರತ್ಕಲ್: 4 ಲಕ್ಷ ರೂ‌. ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ ದಿನೇಶ್

0
image_editor_output_image39381141-1734621603341.jpg

ಮಂಗಳೂರ: ಆಸ್ತಿ ಪಹಣಿಗೆ ವಾರಸುದಾರರ ಹೆಸರನ್ನು ಸೇರ್ಪಡಿಸಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿ ಆಸ್ತಿಯ ಪಹಣೆಗೆ ವಾರಸುದಾರರನ್ನು ಸೇರಿಸಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಿದ್ದು, ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದರು.

ಈ ಬಗ್ಗೆ ಅರ್ಜಿ ಸಲ್ಲಿಸಿದ ದಿನಾಂಕ: 09-12-2024 ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಛೇರಿಗೆ ಹೋಗಿ ವಿಚಾರಿಸಲಾಗಿ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ರೂ 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!