March 20, 2026

ಪೊಲೀಸರ ವಿಶೇಷ ಕಾರ್ಯಾಚರಣೆ: 25 ಐಷಾರಾಮಿ ವೈಟ್ ಬೋರ್ಡ್ ಕಾರುಗಳ ಸೀಝ್

0
image_editor_output_image1041503430-1734674128429.jpg

ಬೆಂಗಳೂರು: ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.

ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!