ರಾಸಾಯನಿಕ ತುಂಬಿದ್ದ ಟ್ರಕ್ ಇತರ ವಾಹನಗಳಿಗೆ ಢಿಕ್ಕಿ: ಐವರು ಸಜೀವ ದಹನ, 37 ಮಂದಿಗೆ ಗಾಯ
ಜೈಪುರ: ರಾಜಸ್ತಾನದ ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ರಾಸಾಯನಿಕ ತುಂಬಿದ್ದ ಟ್ರಕ್ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಜೀವ ದಹನವಾಗಿದ್ದು, 37 ಮಂದಿ ಗಾಯಗೊಂಡಿದ್ದಾರೆ.
ಸುಮಾರು 30 ಟ್ರಕ್‌ಗಳು ಮತ್ತು ಇತರ ವಾಹನಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ. ದುರ್ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. 37 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಗಾಯಾಳುಗಳು ದಾಖಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಭೇಟಿ ನೀಡಿ ಅಲ್ಲಿನ ವೈದ್ಯರೊಂದಿಗೆ ಮಾತನಾಡಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.