March 27, 2026

ಬೆಳ್ತಂಗಡಿ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಬ್ಬಿಣ ಸಾಗಿಸುತ್ತಿದ್ದ ಲಾರಿ ವಶಕ್ಕೆ

0
image_editor_output_image1230792541-1734766221737.jpg

ಬೆಳ್ತಂಗಡಿ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಬ್ಬಿಣ ಸಾಗಿಸುತ್ತಿದ್ದ (ಗುಜರಿ) ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ. ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ. 16ರಂದು ರಾತ್ರಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್‌ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!