ಶಿವಮೊಗ್ಗ: ಪತ್ನಿಯನ್ನು ಚಾಕು ಇರಿದು ಹತ್ಯೆಗೈದ ಪತಿ
ಶಿವಮೊಗ್ಗ: ಪತ್ನಿಯಮೇಲಿನ ಅನುಮಾನದಿಂದ ಪತಿಯೇ ಆಕೆಗೆ ಚಾಕು ಇರಿದು ಹತ್ಯೆಗೈದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ರುಕ್ಸನಾ (38) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಯೂಸುಫ್ ಎಂದು ಗುರುತಿಸಲಾಗಿದೆ. ಆರೋಪಿ, ರುಕ್ಸನಾಳನ್ನು ಕಳೆದ 13 ವರ್ಷದ ಹಿಂದೆ ಮದುವೆಯಾಗಿದ್ದ.
ಇತ್ತೀಚೆಗೆ ಪತ್ನಿ ಮೇಲೆ ಸಂಶಯ ವ್ಯಕ್ತಪಡಿಸಿ ಆರೋಪಿ ಗಲಾಟೆ ಮಾಡಿದ್ದ. ಅಲ್ಲದೇ ಕಳೆದ ಮೂರು ದಿನಗಳ ಹಿಂದೆ ಸಹ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.