March 18, 2025

ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌: ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ

0

ನವದೆಹಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಇನ್ನು ಮುಂದೆ 5, 8ನೇ ಕ್ಲಾಸ್‌ನಲ್ಲಿ ವಿದ್ಯಾರ್ಥಿಯನ್ನು ಫೇಲ್‌ ಮಾಡಬಹುದು

ಒಟ್ಟು 30 ಕಿಲೋಮೀಟರ್ ಉದ್ದದ ಯೋಜನೆ ಇದಾಗಿದ್ದು 3.8 ಕಿಲೋಮೀಟರ್ ಸುರಂಗ ಇದ್ದರೆ, 10 ಕಿ.ಮೀ ವಯಡಕ್ಟ್‌ ಇರಲಿದೆ. ಮಾರೇನಹಳ್ಳಿಯಿಂದ ಪ್ರಾರಂಭವಾಗಿ ಅಡ್ಡಹೊಳೆಯವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇಲ್ಲಿ ಬಹಳಷ್ಟು ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ವಿವರವಾದ ಅಂದಾಜು ಮಾಡಬೇಕಿದೆ ಎಂದು ಹಿಂದೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದರು.

 

 

ಕರ್ನಾಟಕ ಸರ್ಕಾರವು ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಲು ಸಿದ್ಧವಿದ್ದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೆಲವು ಸಾವಿರ ಕೋಟಿಗಳನ್ನು ಹೂಡಿಕೆ ಮಾಡಲು ತಮ್ಮ ಇಲಾಖೆ ಪರಿಗಣಿಸಲಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!