March 16, 2025

ಕಾಲೇಜು ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ

0

ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಕಾಲೇಜು ಹಾಸ್ಟೆಲ್‌ನ ಈ ಘಟನೆ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಹಾಸ್ಟೆಲ್‌ನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

 

Leave a Reply

Your email address will not be published. Required fields are marked *

error: Content is protected !!