ನೇಣು ಬಿಗಿದು ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಾರಣಗಳಿಂದ ಮನನೊಂದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ಎಂ.ಜಿ. ಸೋಮಶೇಖರ್(47) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್ ಮನೆಯ ಕೋಣೆಯಲ್ಲೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.