ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ನೇಣಿಗೆ ಶರಣಾದ ತಾಯಿ

ಕೋಲಾರ: ಗಂಡ ಹಾಗೂ ಅವರ ಮನೆಯವರ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಕೂಡ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ.
ಮೌನೀಶ್(7), ನಿತಿನ್(4), ತಾಯಿ ತಿಪ್ಪಮ್ಮ(30) ಮೃತರು. ಪತಿ ಮಣಿ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬೆಮೆಲ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಪ್ಪಮ್ಮ ಪತಿ ಮಣಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.