March 19, 2026

6 ಮದುವೆಯಾಗಿ ಚಿನ್ನಾಭರಣ ದೋಚಿ ಪರಾರಿ: 7ನೇ ಮದುವೆಗೆ ಸಿದ್ಧತೆಯ ವೇಳೆಗೆ ಮಹಿಳೆಯ ಬಂಧನ

0
image_editor_output_image1236665088-1735198212685.jpg

ಉತ್ತರ ಪ್ರದೇಶ: ಅನೇಕರಿಗೆ ಮದ್ವೆ ಹೆಸರಲ್ಲಿ ಮೋಸ ಮಾಡಿದ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಇದೊಂದು ದೊಡ್ಡ ಜಾಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಮಹಿಳೆಯರು ಮಾತ್ರವಲ್ಲದೇ ಈ ಜಾಲದಲ್ಲಿದ್ದ ಹಲವು ಪುರುಷರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಬಂದದಲ್ಲಿ ಈ ಘಟನೆ ನಡೆದಿದೆ. ಬಂಧಿತ ಮಹಿಳೆ ಆರು ಮದ್ವೆಯಾಗಿದ್ದು, ಇದುವರೆಗೆ ಆದ ಮದುವೆಗಳಲ್ಲಿ ಮದುವೆಯಾದ ಮನೆಗಳಲ್ಲಿ ಚಿನ್ನಾಭರಣ ಹಣ ದೋಚಿ ಪರಾರಿಯಾಗಿದ್ದಳು. ಈಗ ಇದೇ ರೀತಿಯ 7ನೇ ಮದುವೆಗೆ ಸಿದ್ಧಗೊಳ್ಳುತ್ತಿದ್ದ ವೇಳೆ ಆಕೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ಸೂಪರಿಟೆಂಡೆಂಟ್ ಶಿವರಾಜ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!