December 27, 2024

ಶಿವಮೊಗ್ಗ: ಜೀಪ್, ಟಿಟಿ ನಡುವೆ ಮುಖಾಮುಖಿ ಢಿಕ್ಕಿ: 8 ಮಂದಿಗೆ ಗಾಯ

0

ಶಿವಮೊಗ್ಗ: ಜೀಪ್ ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ.

ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ವಾಹನ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಪರಿಣಾಮ ಜೀಪ್‌ನಲ್ಲಿದ್ದ 8 ಜನ ಗಾಯಗೊಂಡಿದ್ದಾರೆ. ಇದರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!