August 13, 2026

ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ

0
image_editor_output_image-448969501-1735282981434.jpg

ದಿಸ್ಪುರ್‌: ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಕೊಲೆಯ ಬಳಿಕ ಆತ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಮಹಿಳೆಯನ್ನು ಮೌಸುಮಿ ಗೊಗೊಯ್ ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಭೂಪೇನ್ ದಾಸ್ ಎಂದು ಗುರುತಿಸಲಾಗಿದೆ.

ಲೇಟ್ ಗೇಟ್ ಪ್ರದೇಶದ ಮಹಿಳೆಯ ನಿವಾಸದ ಹೊರಗೆ ಕೊಲೆ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನನ್ನು ಶೀಘ್ರದಲ್ಲೇ ಕಸ್ಟಡಿಗೆ ಪಡೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!