March 26, 2026

ಉಡುಪಿ: ಅಂಬಲಪಾಡಿ ಜಂಕ್ಷನ್‌ನಲ್ಲಿ ಕಾಮಗಾರಿಗೆ ಅಗೆದಿದ್ದ ಬೃಹತ್‌ ಹೊಂಡಕ್ಕೆ ಮಗುಚಿಬಿದ್ದ ಕಾರು

0
image_editor_output_image1982325170-1735293482840.jpg

ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಲೇತುವೆ ಕಾಮಗಾರಿಗೆ ಅಗೆದಿರುವ ಬೃಹತ್‌ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ.

Leave a Reply

Your email address will not be published. Required fields are marked *

error: Content is protected !!