March 26, 2026

ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ಮಾಲಾಧಾರಿ ಸಾವು, 4ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

0
image_editor_output_image1723831449-1735329761768.jpg

ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ ಇದೀಗ 4ಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು 19 ವರ್ಷದ ಲಿಂಗರಾಜ ಬೀರನೂರ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿ ಉಣಕಲ್ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರಗೊಂಡಿದ್ದರು. ಇವರ ಪೈಕಿ ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ.

ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಹಾಗೂ ಮಹೇಶ್ ಟೆಂಗಿನಕಾಯಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ಸರ್ಕಾರ ಹೆಚ್ಚಿನ ಆರ್ಥಿಕ ಸಹಾಯ ಮಾಡಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!