March 26, 2026

ನಡು ರಸ್ತೆಯಲ್ಲೇ ವ್ಹೀಲಿಂಗ್: ಇಬ್ಬರು ಯುವಕರು ಸಾವು

0
image_editor_output_image1722907928-1735329917760.jpg

ಚಿಕ್ಕಬಳ್ಳಾಪುರ: ವ್ಹೀಲಿಂಗ್ ಕ್ರೇಜ್‌ಗೆ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ-ದೇವನಹಳ್ಳಿ ಬೈಪಾಸ್ ರಸ್ತೆಯಲ್ಲಿ ಡಿಯೋ ಗಾಡಿ ಮೂಲಕ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆ ಬರ್ತಿದ್ದ ಕ್ಯಾಂಟರ್‌ಗೆ ಗಾಡಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅರ್ಫಾಜ್ ಹಾಗೂ ಮನೋಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ ಯುವಕರು ವ್ಹೀಲಿಂಗ್ ಮಾಡುತ್ತಿರೋ ದೃಶ್ಯ ರಸ್ತೆ ಬದಿಯ ಅಂಗಡಿಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತದೇಹಗಳನ್ನ ದೇವನಹಳ್ಳಿ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!