ಲೈಂಗಿಕ ದೌರ್ಜನ್ಯ ಆರೋಪ: ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ
ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಚರಿತ್ ಬಾಳಪ್ಪ ಖ್ಯಾತಿ ಪಡೆದಿದ್ದರು.
ನಟ ಚರಿತ್‌ನನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದು, ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ.
ನಿನ್ನನ್ನ ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.