March 26, 2026

ಮಂಗಳೂರು: ನ್ಯೂ ಇಯರ್ ಆಚರಣೆಗೆ ಸಂಘಪರಿವಾರದ ವಿರೋಧ: ಇಸ್ರೇಲ್ ಮೂಲದ ಸಜಂಕಾ ಡಿಜೆ ರದ್ದು

0
image_editor_output_image2089598206-1735377588954.jpg

ಮಂಗಳೂರು: ನಗರದ ಬೋಳಾರದ ಸಿಟಿ ಬೀಚ್ನಲ್ಲಿ ಇಂದು ಸಂಜೆ ನ್ಯೂ ಇಯರ್ ಆಚರಣೆಗೂ ಮೊದಲೇ ನಡೆಯಬೇಕಿದ್ದ ಇಸ್ರೇಲ್ ಮೂಲದ ಪ್ರಖ್ಯಾತ ಸಂಗೀತಗಾರ ಸಜಂಕಾ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆಗಿದೆ.

ಸಂಘ ಪರಿವಾರ ತೀವ್ರ ವಿರೋಧ ಬೆನ್ನಲ್ಲೇ ಇದೀಗ ಕಾರ್ಯಕ್ರಮ ರದ್ದಾಗಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಕಡಲನಗರಿ ಮಂಗಳೂರಿನಲ್ಲಿ ನ್ಯೂ ಇಯರ್ ಆಚರಣೆಗೂ ಮೊದಲೇ ಪಾರ್ಟಿಗಳಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಇಸ್ರೇಲ್ ಮೂಲದ ಪ್ರಖ್ಯಾತ ಸಂಗೀತಗಾರ ಸಜಂಕಾ ಡಿಜೆ ಕುಣಿತದಲ್ಲಿ ಹಿಂದೂ ದೇವರ ಅವಹೇಳನ ಆರೋಪ ಕೇಳಿಬಂದಿತ್ತು. ಹೀಗಾಗಿ ಭಜರಂಗದಳ, ಹಿಂದೂ ಜಾಗರಣಾ ವೇದಿಕೆಯಿಂದ ಕಾರ್ಯಕ್ರಮ ತಡೆಯುವ ಎಚ್ಚರಿಕೆ ನೀಡಿತ್ತು. ಮಂಗಳೂರು ಪೊಲೀಸರಿಗೂ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಸಂಘಟನೆಗಳು ಮನವಿ ಮಾಡಿದ್ದವು.

Leave a Reply

Your email address will not be published. Required fields are marked *

error: Content is protected !!