February 4, 2026

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ 9 ವರ್ಷದ ಬಾಲಕಿ ಮಾಯಿಝ ಮೃತ್ಯು

0
n64510946117353908920714ad8d69d21892599a9b26e07ab688d768161f5642648da2a6fc170d128be2cb5.jpg

ಮಂಗಳೂರು: ಡಿಸೆಂಬರ್ 8 ರಂದು ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇದೀಗ ಮತ್ತೊಬ್ಬ ಬಾಲಕಿ ಮೃತಪಟ್ಟಿದ್ದು, ಇದರಿಂದಾಗಿ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಗ್ಯಾಸ್ ಸೋರಿಕೆ ಪರಿಣಾಮ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಾತಿಮತ್ ಮಾಯಿಝ (9) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಮೃತಪಟ್ಟಿದ್ದಾಳೆ.

ಡಿಸೆಂಬರ್ 8ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿಯಾಗಿದ್ದ ಮುತ್ತಲಿಬ್ ಅವರ ಮನೆಯಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಈ ಸಂದರ್ಭ ಮುತ್ತಲಿಬ್ ಅವರ ಪತ್ನಿ ಖುಬ್ರಾ ಮತ್ತು ಮಕ್ಕಳಾದ ಝುಲೈಕ ಮೆಅದಿಯಾ, ಮಾಝಿಯಾ ಮತ್ತು ಮಾಯಿದಾ ಕೊಠಡಿಯಲ್ಲಿ ಮಲಗಿದ್ದರು. ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ಘಟನೆಯಲ್ಲಿ ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುತ್ತಲಿಬ್ ಅವರ ಪತ್ನಿ ಖುಬ್ರಾ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ.13ರಂದು ಮೃತಪಟ್ಟಿದ್ದರು. ಕಳೆದ ಗುರುವಾರ ಹಿರಿಯ ಮಗಳು ಝುಲೈಕ ಮೆಅದಿಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಮಾಯಿದಾ ಚಿಕಿತ್ಸೆಗೆ ಸ್ಪಂದಿಸಿ ಗುರುವಾರ ಬಿಡುಗಡೆ ಆಗಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಾತಿಮತ್ ಮಾಯಿಝ ಶನಿವಾರ ಮೃತಪಟ್ಟಿದ್ದಾಳೆ. ಮೊಂಟೆಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿ ಆಗಿದ್ದಳು.

Leave a Reply

Your email address will not be published. Required fields are marked *

You may have missed

error: Content is protected !!